Posts

Showing posts from September, 2024

ಚಾಕುವಿನಿಂದ ಹಲ್ಲೆಮಾಡಿದವನಿಗೆ ಜೈಲು ಸಿಕ್ಷೆ ಶಿವಮೊಗ್ಗ ನ್ಯಾಯಾಲಯ ಆದೇಶ

Image
  ಶಿವಮೊಗ್ಗ :   ಹಣ ಕಾಸಿನ ವ್ಯವಹಾರದ ನೆಪದಲ್ಲಿ ವ್ಯಕ್ತಿ ಒಬ್ಬನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ ವ್ಯಕ್ತಿಗೆ ನ್ಯಾಯಾಲದ ಶಿಕ್ಷೆ ವಿದಿಸಿದೆ . ಹಯಾತ್ ಸಾಬ್, 31 ವರ್ಷ, ದಾಸರ ಕಾಲೋನಿ ಶಿರಾಳಕೊಪ್ಪ ಟೌನ್ ಮತ್ತು ಜಿಯಾವುಲ್ಲಾ ಖಾನ್, 24   ವರ್ಷ, ಹಳ್ಳೂರು ಕೇರಿ, ಶಿರಾಳಕೊಪ್ಪ ಟೌನ್ ಇಬ್ಬರಿಗೂ ಈ ಹಿಂದಿನಿಂದಲೂ ಮಾವಿನ ತೋಟದ ಗುತ್ತಿಗೆಯ ವಿಚಾರವಾಗಿ ಹಣ ಕಾಸಿನ ವ್ಯವಹಾರವಿದ್ದು, ಹಯಾತ್ ಸಾಬ್ ನು ಜಿಯಾವುಲ್ಲಾ ಖಾನ್ ನಿಗೆ 25,000/- ರೂ ಹಣ ಕೊಡಲು ಬಾಕಿ ಇರುತ್ತದೆ. ಜಿಯಾವುಲ್ಲಾ ಖಾನ್ ನು ಸದರಿ ಹಣವನ್ನು ಹಿಂದಿರುಗಿಸಲು ಕೇಳಿದಾಗ ದಿನಾಂಕಃ 15-05-2022 ರಂದು ಬೆಳಗ್ಗೆ ಹಯಾತ್ ಸಾಬ್ ನು ಜಿಯಾವುಲ್ಲಾಖಾನ್ ಗೆ   ಕರೆ ಮಾಡಿದ .     ಶಿರಾಳಕೊಪ್ಪ ಟೌನ್ ನ ಅಣ್ಣಪ್ಪ ಟಿ ಹೋಟೆಲ್ ಗೆ ಬಾ ಹಣ ಕೊಡುತ್ತೇನೆಂದು ತಿಳಿಸಿದ್ದು, ಜಿಯಾವುಲ್ಲಾಖಾನ್ ನು ಅಲ್ಲಿಗೆ ಹೋದಾಗ ಹಯಾತ್ ಸಾಬ್ ನು ನಿನಗೆ ನಾನು ಯಾವ   ಹಣ ಕೊಡಬೇಕು, ಪದೇ ಪದೇ ಕೇಳುತ್ತೀಯ ಎಂದು ಜಗಳ ತೆಗೆದು, ಕೊಲೆ ಮಾಡುವ ಉದ್ದೇಶದಿಂದ ತನ್ನ ಬಳಿ ಇದ್ದ ಚಾಕುವಿನಿಂದ ಜಿಯಾವುಲ್ಲಾಖಾನ್ ನ ಬೆನ್ನಿಗೆ ಹಲ್ಲೆ ಮಾಡಿರುತ್ತಾನೆಂದು ಗಾಯಾಳು ಜಿಯಾವುಲ್ಲಾ ಖಾನ್ ನೀಡಿದ ದೂರಿನ ಮೇರೆಗೆ ಶಿರಾಳಕೊಪ್ಪ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0100/2022 ಕಲಂ 307, 324 ಐಪಿಸಿ ರೀತ್ಯಾ ಪ್ರಕರಣ ದಾಖಲಿಸಲಾಗಿದೆ.         ಪ್ರಕಣದಲ್ಲಿ ಆಗಿನ ತನಿಖಾಧಿಕಾರಿಗಳಾದ   ಶ್ರೀ ರಮೇಶ್, ಶಿರಾಳಕೊಪ್ಪ

ಸೆಬಿ ಮುಖ್ಯಸ್ಥೆ ವಿರುದ್ಧ ಲೋಕಪಾಲ್‌ಗೆ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ದೂರು

Image
 ‌ ಕೋಲ್ಕತ್ತಾ: ಟಿ.ಎಂ.ಸಿ ಸಂಸದ ಮಹುವಾ ಮೊಯಿತ್ರಾ ಅವರು ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಅಧ್ಯಕ್ಷೆ ಮಾಧಬಿ ಪುರಿ ಬುಚ್ ಅವರ ವಿರುದ್ಧ ಶುಕ್ರವಾರ ಲೋಕಪಾಲ್‌ಗೆ ದೂರು ನೀಡಿದ್ದಾರೆ.  ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಟಿಎಂಸಿ ಸಂಸದೆ, ಪುರಿ-ಬುಚ್ ವಿರುದ್ಧ ಲೋಕಪಾಲ್ ಗೆ ವಿದ್ಯುನ್ಮಾನವಾಗಿ ಮತ್ತು ಭೌತಿಕವಾಗಿ ದೂರನ್ನು ನೀಡಲಾಗಿದೆ. ಲೋಕಪಾಲ್ 30 ದಿನಗಳ ಒಳಗಾಗಿ ಅದನ್ನು ಪ್ರಾಥಮಿಕ ತನಿಖೆಗಾಗಿ ಸಿ.ಬಿ.ಐ ಅಥವಾ ಇಡಿಗೆ ಉಲ್ಲೇಖಿಸಬೇಕು. ನಂತರ ಎಫ್ ಐ ಆರ್ ದಾಖಲಿಸಿ ವಿಚಾರಣೆ ನಡೆಸಬೇಕು.  ಪ್ರತಿಯೊಂದು ಘಟಕಕ್ಕೂ ಸಮನ್ಸ್ ನೀಡಬೇಕು, ಈ ಕುರಿತ ಎಲ್ಲಾ ಲಿಂಕ್ ನ್ನು ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಮೂರು ಪುಟಗಳ ಪತ್ರದಲ್ಲಿ, ಮಹುವಾ ಮೊಯಿತ್ರಾ ಅವರು, ಈ ಪ್ರಕರಣ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿದೆ ಮತ್ತು ಕೋಟಿಗಟ್ಟಲೆ ಹೂಡಿಕೆದಾರರ ಹಿತಾಸಕ್ತಿಗಳಿಗೆ ಸಂಬಂಧಿಸಿದೆ.  ಈ ಬಗ್ಗೆ ತನಿಖೆ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.ಗೌತಮ್ ಅದಾನಿ ಗ್ರೂಪ್‌ನ ವಂಚನೆಯನ್ನು ಕಳೆದ ವರ್ಷ ಬಹಿರಂಗಪಡಿಸಿದ್ದ ಅಮೆರಿಕ ಮೂಲದ ಶಾರ್ಟ್‌ ಸೆಲ್ಲರ್‌ ಕಂಪನಿ ಹಿಂಡನ್‌ಬರ್ಗ್‌ 2024ರ ಆಗಸ್ಟ್ 10 ರಂದು ಭಾರತಕ್ಕೆ ಸಂಬಂಧಿಸಿದ ಮತ್ತೊಂದು ಸ್ಪೋಟಕ ವರದಿಯನ್ನು ಬಹಿರಂಗಪಡಿಸಿತ್ತು. ಭಾರತೀಯ ಷೇರು ಪೇಟೆ ನಿಯಂತ್ರಣ ಮಂಡಳಿ(ಸೆಬಿ) ಅಧ್ಯಕ್ಷೆ ಮಾಧವಿ ಬುಚ್ ಮತ್ತು ಅವರ ಪತಿ ಧವಲ್ ಬುಚ್ ಅದಾನಿ ಮನಿ ಸೈಫನಿಂಗ್

ಮತ್ತೆ ಹೊತ್ತಿ ಉರಿಯುತ್ತಿರುವ ಮಣಿಪುರ..! ಕಣ್ಣು ಉಚ್ಚಿ ಕೂತಿರುವ ಪ್ರಧಾನಿ ಮೋದಿ: ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರೆ ಸುಪ್ರಿಯಾ ಶ್ರೀಣೇತ್‌ ಆರೋಪ.

Image
  ನವದೆಹಲಿ:  ಮಣಿಪುರದ ಮತ್ತೆ ಉರಿಯತೊಡಗಿದೆ..! ಕಳೆದ 16 ತಿಂಗಳಿನಿಂದ ಮಣಿಪುರದಲ್ಲಿ ಮೈತಿಸ್‌ ಹಾಗೂ ಕುಕೀಸ್‌ ನಡುವೆ ನಡೆಯುತ್ತಿರುವ ಗಲಬೆಯಗ್ಗೆ ಕೇಂದ್ರ ಸರ್ಕಾರ ಮೌನ ವಹಿಸಿದ್ದು,ದಿನಕಳೆದಂತೆ ಮಣಿಪುರದ ಪರಿಸ್ಥಿತಿ ನಿನ್ನಷ್ಟು ಹದಗೆಗುತ್ತಿದೆ. ಇದುವರೆಗೆ ಸ್ಥಳೀಯ ಕನರು ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿಗಿಳಿದ ಕಸೆದುಕೊಂಡಿದ್ದ ಬಂದೂಕುಗಳಿಂದ ಹಲ್ಲೆಗಳನ್ನು ನಡೆಸುತ್ತಿದ್ದು ಆದರೆ ಈಗೆ ಈ ಗಲಬೆಗಳಲ್ಲಿ ಕೆಲವು ಉಗ್ರವಾದಿ ಸಂಘಟೆಗಳು ಸೇರಿಕೊಂಡಿದೆ ಎನ್ನುವ ಅನು ಮಾನ ವ್ಯಕ್ತವಾಗುತ್ತಿದೆ. ಇದಕ್ಕೆ ಕಾರಣ ಮಣಿಪುರದಲ್ಲಿ ಇತ್ತೀಚಿನ ದಿನಗಳಲ್ಲಿ ಗಲಬೆಯಲ್ಲಿ ಶಾಮೀಲಾಗಿರುವ ಸಂಘಟನೆಗಳು ‌ಅತ್ಯಾದುನಿಕ ಆರ್‌.ಪಿ.ಜಿ ಹಾಗೂ ಡ್ರೋನ್‌ ಗಳಿಂದ ಹಲ್ಲೆಮಾಡಲಾಗುತ್ತಿದ್ದು, ಈ ಗಟನೆಗಳು 10-15 ದಿನಗಳಿಂದ ಅತಿಹೆಚ್ಚಾಗಿ ನಡೆಯುತ್ತಿದೆ. ಇದರ ಪರಿಣಾಮ ಮಣಿಪುರದ ಗಲಬೆಗಳ ನೆಪದಲ್ಲಿ ವಿದೇಶಿ ಶಕ್ತಿಗಳು ಇದರೊಳಗೆ ಶಾಮೀಲಾಗಿರಬಹದು ಇನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ನಿನ್ನೆ ಪತ್ರಿಕಾಗೋಷ್ಟಿಯನ್ನು ನಡೆಸಿ ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರೆಯಾಗಿರುವ ಸುಪ್ರಿಯಾ ಶ್ರೀಣೇತ್‌ ಆರೋಪ ಮಾಡಿದ್ದಾರೆ.  ಇದನ್ನೆಲ್ಲಾ ಹತೋಟಿಗೆ ತರಬೇಕಾಗಿರುವ ಕೇಂದ್ರದ ಮೋದಿ ಸರ್ಕಾರ ತನಗೂ ಮಣಿಪುರಕ್ಕೆ ಸಂಭಂದವೇ ಇಲ್ಲಾ ಎನ್ನುವಹಾಗೆ ನಡೆದುಕೊಳ್ಳುತ್ತಿದ್ದು ಇಂಥ ನಿಶ್ಕ್ರೀಯ ಪ್ರಧಾನಿಯನ್ನು ನಮ್ಮ ದೇಶ ಎಂದಿಗೂ ನೋಡಿರಲಿಲ್ಲಾ ಎಂದು ಹೇಳಿದ್ದಾರೆ. ಮಾಧ್ಯಮಗಳು ಮಣ

ರೈತರ ಕೂಗಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ..!

Image
  ಬೆಂಗಳೂರು: ಸಮಾಜವಾಗಿ ಹಿನ್ನೆಲೆ ಬಡವರ ಕಷ್ಟಕ್ಕೆ ಸಧಾಕಾಲ ಬೆನ್ನೆಲುಬಾಗಿ ನಿಲ್ಲುವ ರಾಜ್ಯದ ಮುಖ್ಯಮಂತ್ರಿಗಳಾಗಿರುವ ಸಿದ್ದರಾಮಯ್ಯನವರು ಇಂದು ವಿಧಾನ ಸೌದದ ತಮ್ಮ ಕಛೇರಿಯಲ್ಲಿ ರೈತ ಮುಖಂಡರನ್ನು ಬೇಟಿಯಾಗಿ ಅವರ ಕಷ್ಟರನ್ನು ಆಲಿಸುವ ಮುಖೇನೆ ಸಮಸ್ಯೆಗಳನ್ನು ಬಗೆಹರಿಸುವ ವರವಸೆಯನ್ನು ನೀಡಿದರು. ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳು ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ ರೈತ ಸಮುದಾಯದ ಬಹು ಮುಖ್ಯವಾದ ಬೇಡಿಕೆಗಳ ಬಗ್ಗೆ ಚರ್ಚಿಸಿದರು. ಸರದಿಯಂತೆ ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳು ಅಧಿಕಾರಿಗಳು ಸೂಚಿಸಿದರು.

ಸಿ.ಎಂ ಸಿದ್ದರಾಮಯ್ಯ ಯು.ಎಸ್‌ ಇಂಡಿಯಾ ಪ್ರತಿನಿಧಿಗಳೊಂದಿಗೆ ಚರ್ಚೆ..!

Image
  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಯು.ಎಸ್. ಇಂಡಿಯಾ ಬಿಸಿನೆಸ್ ಕೌನ್ಸಿಲ್ ನ ಪ್ರತಿನಿಧಿಗಳೊಂದಿಗೆ ದುಂಡು ಮೇಜಿನ ಸಭೆಯಲ್ಲಿ ಭಾಗವಹಿಸಿ ಚರ್ಚಿಸಿದರು. ಗ್ರಾಮೀಣಾಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ,  ಐ.ಟಿ. ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಏಕ್ ರೂಪ್ ಕೌರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ದಿನ ಭವಿಷ್ಯ/10/09/2024/ ಮಂಗಳವಾರ

Image
  ಮೇಷ ರಾಶಿ. ದೂರ ಪ್ರಯಾಣದಲ್ಲಿ ವಾಹನ ಅಪಘಾತವಾಗುವ ಸೂಚನೆಗಳಿವೆ. ಆಧ್ಯಾತ್ಮಿಕ ಚಿಂತನೆ ಹೆಚ್ಚಾಗುತ್ತದೆ. ಪ್ರಮುಖ ಕಾರ್ಯಕ್ರಮಗಳು ಮುಂದೂಡಲ್ಪಡುತ್ತವೆ ಮತ್ತು  ಬಂಧು ಮಿತ್ರರೊಂದಿಗೆ ವಿವಾದಗಳು ಉಂಟಾಗುತ್ತವೆ. ಆಲೋಚನೆಗಳು ಸ್ಥಿರವಾಗಿರುವುದಿಲ್ಲ. ವ್ಯಾಪಾರ ಮತ್ತು ಉದ್ಯೋಗಗಳಲ್ಲಿ ಕೆಲಸದ ಒತ್ತಡ  ಹೆಚ್ಚಾಗುತ್ತದೆ. ವೃಷಭ ರಾಶಿ. ಆದಾಯ ಮತ್ತಷ್ಟು ಹೆಚ್ಚಾಗುತ್ತದೆ. ರಾಜಕೀಯ ವಲಯಗಳಿಂದ ಅಪರೂಪದ ಆಹ್ವಾನಗಳು ಬರುತ್ತವೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಾರ್ಯ ಸಿದ್ದತೆ ಇರುತ್ತದೆ. ಸ್ಥಿರಾಸ್ತಿ ಖರೀದಿಸುತ್ತೀರಿ. ಉದ್ಯೋಗದಲ್ಲಿ ಬಡ್ತಿ ಹೆಚ್ಚಾಗುತ್ತದೆ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಮಿಥುನ ರಾಶಿ. ಅಮೂಲ್ಯ ವಸ್ತುಗಳನ್ನು ಉಡುಗೊರೆಯಾಗಿ ಸ್ವೀಕರಿಸಲಾಗುತ್ತದೆ. ಬಾಲ್ಯದ ಸ್ನೇಹಿತರನ್ನು ಭೇಟಿ ಮಾಡುತ್ತೀರಿ. ಹೊಸ ವಾಹನ ಯೋಗವಿದೆ. ಸಮಾಜದಲ್ಲಿ ಗೌರವ ಹೆಚ್ಚಾಗುತ್ತದೆ. ಅಧಿಕಾರಿಗಳೊಂದಿಗಿನ ಚರ್ಚೆ ಫಲ ನೀಡುತ್ತದೆ. ವ್ಯಾಪಾರಗಳಲ್ಲಿ ಹೊಸ ಹೂಡಿಕೆಗಳು ದೊರೆಯುತ್ತವೆ. ಉದ್ಯೋಗದಲ್ಲಿನ ಅಡೆತಡೆಗಳನ್ನು ನಿವಾರಿಸಲಾಗುತ್ತದೆ. ಕಟಕ ರಾಶಿ. ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು. ಬಂಧು ಮಿತ್ರರೊಂದಿಗೆ ಭಿನ್ನಾಭಿಪ್ರಾಯ ಉಂಟಾಗುತ್ತದೆ. ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ಕೆಲಸದಲ್ಲಿ ಸ್ವಲ್ಪ ಅಡೆತಡೆಗಳು ಕಂಡುಬರುತ್ತವೆ. ವ್ಯಾಪಾರಗಳು ನಿರುತ್ಸಾಹಗೊಳಿಸುತ್ತವೆ. ಉದ್ಯ

ಆಹಾರ ಕಲಬೆರಕೆ ತಡೆಗಟ್ಟಲು ದಾಳಿ : ನಿಯಮ ಉಲ್ಲಂಘನೆ ವಿರುದ್ದ ದಂಡ

Image
  ಶಿವಮೊಗ್ಗ, ಸೆ .05   ಆಹಾರ ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಗಳು ಜಂಟಿಯಾಗಿ ಮಂಗಳವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ದಾಳಿ ನಡೆಸಿ ಪಟ್ಟಣ ಸಾಮಗ್ರಿ ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ದಂಡ ವಿಧಿಸಿರುತ್ತಾರೆ.  ಆಹಾರ ಸುರಕ್ಷತೆ ಮತ್ತು ಕಲಬೆರಕೆ ತಡೆಗಟ್ಟಲು ಜಿಲ್ಲಾಧಿಕಾರಿಗಳ ನಿರ್ದೇಶನದ ಅನ್ವಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಪಟ್ಟಣ ಸಾಮಗ್ರಿ ನಿಯಮ ಉಲ್ಲಂಘನೆ ಪ್ರಕರಣದಡಿ ಕೆಎಸ್‌ಆರ್‌ಟಿಸಿ ನಿಲ್ದಾಣದ ಸ್ವಾತಿ ಎಂಟರ್ಪ್ರೈಸಸ್ ಇವರಿಗೆ ರೂ.10,000/- ಮತ್ತು ಹಾಟ್‌ಸ್ಪಾಟ್ ಕೆಫೆ ಹಾಗೂ ರೈಲ್ವೆ ನಿಲ್ದಾಣದಲ್ಲಿನ ಕಾಫಿ ಶಾಪ್ ಇವರಿಗೆ ತಲಾ ರೂ.5000/- ಗಳ ದಂಡವನ್ನು ಕಾನೂನು ಮಾಪನ ಶಾಸ್ತ್ರ ಇಲಾಖೆ ಅಧಿಕಾರಿಗಳು ವಿಧಿಸಿರುತ್ತಾರೆ.   ಮತ್ತು ಗೃಹಬಳಕೆ ಸಿಲಿಂಡರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡುತ್ತಿದ್ದ ಮೂರು ಹೋಟೆಲ್ ಗಳಿಂದ ಒಟ್ಟು ಏಳು ಸಿಲಿಂಡರ್‌ಗಳನ್ನು ವಶಕ್ಕೆ ಪಡೆದು ಅವರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿರುತ್ತಾರೆ.  ತಯಾರಿ ದಿನಾಂಕ ಮತ್ತು ಎಕ್ಸ್ಪೈರಿ ದಿನಾಂಕ ಇಲ್ಲದ ಆಹಾರ ಪದಾರ್ಥಗಳನ್ನು ಮಾರುತ್ತಿದ್ದ ಅಂಗಡಿಗಳಿಗೆ ಆಹಾರ ಸುರಕ್ಷತಾ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು ದಿನಾಂಕ ನಮೂದಾಗಿರದ ಆಹಾರ ಪ

ಅರ್ಥಪೂರ್ಣ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಪೂರ್ವ ತಯಾರಿ : ಗುರುದತ್ತ ಹೆಗಡೆ

Image
  ಶಿವಮೊಗ್ಗ, ಸೆ .05         ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸೆ.15 ರಂದು ಮಾನವ ಸರಪಳಿ ರಚನೆ ಮಾಡುವ ಮೂಲಕ ಹಬ್ಬದ ರೀತಿಯಲ್ಲಿ, ಅರ್ಥಪೂರ್ಣವಾಗಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ಅಗತ್ಯವಾದ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು.  ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೆ.15 ರಂದು ನಡೆಯಲಿರುವ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಪೂರ್ವಸಿದ್ದತೆ ಕುರಿತು ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.          ಸೆ.15 ರಂದು ರಾಜ್ಯದಾದ್ಯಂತ ಏಕ ಕಾಲದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಮಾನವ ಸರಪಳಿ ರಚಿಸುವ ಮೂಲಕ ಆಚರಿಸಲಾಗುವುದು. ನಮ್ಮ ಜಿಲ್ಲೆಗೆ ಮಾರ್ಗನಕ್ಷೆ ನೀಡಿರುವನ್ವಯ ಭದ್ರಾವತಿ ತಾಲ್ಲೂಕಿನ ಕಾರೇಹಳ್ಳಿಯಿಂದ ಪ್ರಾರಂಭಿಸಿ ಶಿವಮೊಗ್ಗ ನಗರದ ಮೂಲಕ ಶಿವಮೊಗ್ಗ ತಾಲ್ಲೂಕಿನ ಮಡಿಕೆ ಚೀಲೂರುವರೆಗೆ ಸುಮಾರು 60 ಕಿ.ಮೀ ಮಾನವ ಸರಪಳಿ ರಚಿಸಬೇಕಾಗಿರುತ್ತದೆ.        ಅದಕ್ಕೆ 50 ರಿಂದ 55 ಸಾವಿರ ಜನರ ಅವಶ್ಯಕತೆಯಿದ್ದು ಈ ಮಾರ್ಗದ 8 ಪಂಚಾಯತ್‌ಗಳಿಗೆ ನೋಡಲ್ ಅಧಿಕಾರಿ ನೇಮಿಸಿ, ಈ ಮಾರ್ಗದಲ್ಲಿ ಅಗತ್ಯವಾದ ಜನರನ್ನು ವ್ಯವಸ್ಥೆ ಮಾಡಬೇಕು. ಮೊದಲೇ ಸ್ಥಳ ಪರಿಶೀಲನೆ ಮಾಡಬೇಕು. ಗ್ರಾಮ ಲೆಕ್ಕಿಗರು, ಪಿಡಿಓ, ಶಿಕ್ಷಕರು, ಆಶಾ, ಅಂಗನವಾಡಿ ಕಾರ್ಯಕರ್ತರು ಇತರೆ ಸಿಬ್ಬ

ಬಿಜೆಪಿಗೆ 'ಆಪರೇಷನ್ ಹಸ್ತ'ದ ಶಾಕ್; ಕಾಂಗ್ರೆಸ್ ಸೇರಿದ 6 ಸದಸ್ಯರು

Image
  ಚಾಮರಾಜನಗರ: ಚಾಮರಾಜನಗರದಲ್ಲಿ ಬಿಜೆಪಿಗೆ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಶಾಕ್ ನೀಡಿದ್ದು 6 ಮಂದಿ ಬಿಜೆಪಿ ಸದಸ್ಯರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಗುಂಡ್ಲುಪೇಟೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಈ ದೊಡ್ಡ ಬೆಳವಣಿಗೆ ನಡೆದಿದೆ.ಬಿಜೆಪಿಯ 6 ಸದಸ್ಯರು ಕಾಂಗ್ರೆಸ್ ಸೇರ್ಪಡೆಯಿಂದ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರೂ ಆಗಿರುವ ನಿರಂಜನ್ ಕುಮಾರ್​ಗೆ ಸ್ವ ಕ್ಷೇತ್ರದಲ್ಲೇ ಭಾರಿ ಮುಖಭಂಗವಾಗಿದೆ.  13 ಮಂದಿ ಬಿಜೆಪಿ ಸದಸ್ಯರ ಪೈಕಿ 6 ಸದಸ್ಯರಿಗೆ ಕಾಂಗ್ರೆಸ್ ಗಾಳ ಹಾಕಿತ್ತು. ಅದರಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ. ಇನ್ನು ಕಾಂಗ್ರೆಸ್​​ಗೆ ಬೆಂಬಲ ನೀಡಿದ ಬಿಜೆಪಿ ಸದಸ್ಯರಿಗೆ ಪುರಸಭೆ ಅಧ್ಯಕ್ಷ ಹಾಗೂ ಉಪಾದ್ಯಕ್ಷ ಸ್ಥಾನವನ್ನೇ ಕಾಂಗ್ರೆಸ್ ಬಿಟ್ಟು ಕೊಟ್ಟಿದೆ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಬಂದ ಕಿರಣ್ ಗೌಡ ನಾಮ ನಿರ್ದೇಶನ ಮಾಡಲಾಗಿದ್ದು, ಉಪಾಧ್ಯಕ್ಷೆ ಸ್ಥಾನಕ್ಕೆ ಬಿಜೆಪಿಯಿಂದ ಕಾಂಗ್ರೆಸ್​​​ಗೆ ಬೆಂಬಲಿಸಿದ ಹೀನಾ ಕೌಸರ್ ನಾಮನಿರ್ದೇಶನ ಮಾಡಲಾಗಿದೆ. ಇನ್ನು ಬಿಜೆಪಿಯಿಂದ ನಾಮಿನೇಷನ್ ಮಾಡುವವರೇ ಇಲ್ಲದ ಕಾರಣ ಅಧ್ಯಕ್ಷ ಸ್ಥಾನ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ. ವರದಿ: ಡಿ.ಪಿ ಅರವಿಂದ್.              ಶಿವಮೊಗ್ಗ

ಮಲಯಾಳಂ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

Image
 ತಿರುವನಂತಪುರಂ: ಮಲಯಾಳಂನ ಬೆಂಗಳೂರು ಡೇಸ್, ಪ್ರೇಮಂ ಮೊದಲಾದ ಹಿಟ್ ಸಿನೆಮಾಗಳ ನಾಯಕ ನಟ ನಿವಿನ್ ಪೌಲಿ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಾಗಿದೆ. ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಮಹಿಳೆಯೊಬ್ಬರು ನೀಡಿದ ದೂರಿಗೆ ಸಂಬಂಧಿಸಿದಂತೆ ನಟ ನಿವಿನ್ ಪೌಲಿ, ಮಲಯಾಳಂ ನಿರ್ಮಾಪಕ ಎ.ಕೆ.ಸುನಿಲ್ ಮತ್ತು ಇತರ ನಾಲ್ವರ ವಿರುದ್ಧ ಕೇರಳ ಪೊಲೀಸರು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 376 (ಅತ್ಯಾಚಾರ) ಸೇರಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸಂಬಂಧಿತ ವಿಭಾಗಗಳ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಎರ್ನಾಕುಲಂನ ಊನುಕಲ್ ಪೊಲೀಸರು  ಖಚಿತಪಡಿಸಿದ್ದಾರೆ. ದೂರಿನಲ್ಲಿ ಏನಿದೆ? 2023ರ ನವೆಂಬರ್ ತಿಂಗಳಲ್ಲಿ ದುಬೈನ ಹೋಟೆಲೊಂದರಲ್ಲಿ ಈ ಘಟನೆ ನಡೆದಿದೆ. ದೂರು ನೀಡಿದ ಯುವತಿ ಬೇರೆ ಕೆಲಸದ ನಿಮಿತ್ತ ದುಬೈಗೆ ತೆರಳಿದ್ದರು. ಯುವತಿಯ ಸ್ನೇಹಿತೆ ಮೂಲಕ ಈಕೆ ಚಿತ್ರ ತಂಡದ ಬಳಿಗೆ ತೆರಳಿದ್ದರು ಎನ್ನಲಾಗಿದೆ. ಯುವತಿ ತನ್ನನ್ನು ಕರೆದೊಯ್ದ ಮಹಿಳೆಯನ್ನು ಮೊದಲ ಆರೋಪಿ ಎಂದು ದೂರಿನಲ್ಲಿ ಹೇಳಿದ್ದಾರೆ. ಎಕೆ ಸುನಿಲ್, ಬಿನು, ಬಶೀರ್, ಕುಟ್ಟನ್ ಹಾಗೂ 6ನೇ ಆರೋಪಿ ನಿವಿನ್ ಪೌಲಿ ಎಂದು ದೂರು ದಾಖಲಿಸಿದ್ದಾರೆ. ಮಾದಕದ್ರವ್ಯ ನೀಡಿ ದೌರ್ಜನ್ಯ ನಡೆಸಿದ್ದಾರೆ. 6 ದಿನಗಳ ಕಾಲ ಹೋಟೆಲ್‌ನಲ್ಲಿ ಕೂಡಿ ಹಾಕಿ ಈ ದೌರ್ಜನ್ಯ ನಡೆಸಿದ್ದಾರೆ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿದ್ದರಾಮಯ್ಯ

Image
  ಬೆಂಗಳೂರು, ಸೆ.4:  ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.  ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ ವಿಷಯಗಳ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಸಭೆಯಲ್ಲಿ ಮಾತನಾಡಿದ ನಿಯೋಗದ ಪ್ರತಿನಿಧಿಗಳು 2017ರಲ್ಲಿ ವೃಂದ ಮತ್ತು ನೇಮಕಾತಿ ನಿಯಮಾವಳಿಗೆ ತಿದ್ದುಪಡಿ ಮಾಡಿದ ಬಳಿಕ ಸೇವಾ ನಿಯಮಗಳನ್ನು ಪೂರ್ವಾನ್ವಯವಾಗುವಂತೆ ಅನುಷ್ಠಾನಗೊಳಿಸಬಾರದು. ಪದವೀಧರರಾಗಿರುವ 40 ಸಾವಿರಕ್ಕೂ ಹೆಚ್ಚು ಇರುವ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ ಆದೇಶ ಹೊರಡಿಸಬೇಕು. ನೇಮಕಾತಿ 7ನೇ ತರಗತಿವರೆಗೆ ಎಂದು ಹೇಳಿ ಈಗ 5ನೇ ತರಗತಿವರೆಗೆ ಎಂದು ಹಿಂಬಡ್ತಿ ನೀಡಲಾಗಿದೆ. ಆಯಾ ಜಿಲ್ಲಾ ನೇಮಕಾತಿ ಸಮಿತಿಯ ಮಟ್ಟದಲ್ಲಿ ಮುಖ್ಯೋಪಾಧ್ಯಾಯ ಹುದ್ದೆಗಳಿಗೆ ಈ ಮೊದಲು ಮುಂಬಡ್ತಿ ನೀಡಲಾಗುತ್ತಿತ್ತು. ಅದನ್ನು ಕಳೆದ ಮೂರು ವರ್ಷಗಳಿಂದ ನಿಲ್ಲಿಸಲಾಗಿದ್ದು, ಇದನ್ನು ಮುಂದುವರೆಸಬೇಕು. ಪ್ರಾಥಮಿಕ

ಎಲೆಕ್ಟ್ರಿಕ್‌ ಬೈಕ್‌ ಸಹವಾಸ ಸಾಕಪ್ಪ ಸಾಕು ಎಂದ ನಟ ಶಂಕರ್..!‌

Image
  ಬೆಂಗಳೂರು: ಎಲೆಕ್ಟ್ರಿಕ್‌ ಬೈಕ್‌ ಅಂದ್ರೆ ಈಗ ಸಾಮಾನ್ಯವಾಗಿ ಎಲ್ಲರು ಇಷ್ಟ ಪಡೋದ್ರಲ್ಲಿ ಆಸ್ಚರ್ಯವಿಲ್ಲಾ ಎಂದೆನಿಸುತ್ತೆ ಆದ್ರೆ ಕನ್ನಡ ಚಲಯ ಚಿತ್ರ ನಟ ಶಂಕರ್‌ ರವರ ಅಭಿಪ್ರಾಯವೇ ಬೇರೆಯಾಗಿದೆ.  ಹೌದು ಮೊನ್ನೆ ಸಾಮಾಜಿಕ ಜಾಲತಾಟದಲ್ಲಿ ನಟ ಶಂಕರ್‌ ಇ.ವಿ ಬೈಕ್‌ಗಳ ಬಗ್ಗೆ ತಮ್ಮ ಅಬಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಎಲೆಕ್ಟ್ರಿಕ್‌ ಸ್ಕೂಟರ್‌ ಬೆಲೆ ದುಬಾರಿ,ಆದರೆ ಒಮ್ಮ ಹೂಡಿಕೆ ಮಾಡಿದರೆ ಬಳಿಕ ಸುಭ. ದುಬಾರಿ ಪಟ್ರೋಲ್‌ ಬೇಕಿಲ್ಲ. ಕಿಲೋಮಿಟರ್‌ಗೆ 30 ರಿಂದ 50 ಪೈಸೆ ಖರ್ಚ, ಸ್ಕೂಟರ್‌ ನಿರ್ವಹಣೆ ವೆಚ್ಚ ಕೂಡ ಕಡಿಮೆ ಪರಿಸರಕ್ಕೂ ಪೂರಕ. ವಾಯ ಮಾಲಿನ್ಯವಿಲ್ಲ. ಶಬ್ದದ ಕಿರಿಕಿ ಇಲ್ಲ. ಈ ಎಲ್ಲಾ ಲೆಕ್ಕಾಚಾರದೊಂದಿಗೆ ಎಲೆಕ್ಟ್ರಿಕ್‌ ಬೈಕ್‌  ಖರಿದಿಸಿದ ನಟ ಶಂಕರ್‌ ಅಶ್ವತ್ಥ್‌ ಇದೀಗ ಇ.ವಿ ಸಹವಾಸವೇ ಸಾಕು ಅಂತಿದ್ದಾರೆ. ಎಲೆಕ್ಟ್ರಿಕ್‌ ಬೈಕ್‌ ಗ್ರಹಚಾರ ಕೆಟ್ರೆ ಎಲೆಕ್ಟ್ರಿಕ್‌ ಶಾಕ್‌ ಹೊಡೆಯುತ್ತೆ ಎಂದು ಶಂಕರ್‌ ಸಾಮಾಜಿಕ ಚಾಲ ತಾಣದಲ್ಲಿ ಹೇಳಿಕೊಂಡಿದ್ದಾರೆ. ಆದರೆ ಅವರ ಬಳಿಯಿರುವ ಇ.ವಿ ಬೈಕ್‌ ಯಾವ ಕಂಪನಿಯದ್ದು,ಅದು ನಿಲ್ಲಿಸಿದಾಗ ಅಥವಾ ಚಲಿಸುವಾಗ ಇಲ್ಲವೇ ಚಾರ್ಜ್‌ಗೆ ಇಟ್ಟಾಗ ಯಾವಾಗ ಶಾಕ್‌ ಹೊಡೆಯುತ್ತದೆ ಎಂದು ಹೇಳಿಕೊಂಡಿಲ್ಲಾ. ವರದಿ:ಡಿ.ಪಿ ಅರವಿಂದ್‌ ಶಿವಮೊಗ್ಗ.

ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು: ಸಿ.ಎಂ ಸಿದ್ದರಾಮಯ್ಯ ಖಡಕ್ ಸೂಚನೆ

Image
  ಸಚಿವ ಈಶ್ವರ್ ಖಂಡ್ರೆಯವರು ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಇವರಿಗೆ ನಿಮ್ಮ‌ ಸಂಪೂರ್ಣ ಸಹಕಾರ ಸಿಕ್ಕರೆ ಇನ್ನಷ್ಟು ಕ್ರಾಂತಿಕಾರಕ ಕೆಲಸ ಮಾಡುತ್ತಾರೆ: ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗೆ ಸಿಎಂ ಕರೆ ಬೆಂಗಳೂರು ಸೆ 3:   ಅರಣ್ಯ ಒತ್ತುವರಿಯನ್ನು ಕಟ್ಟು ನಿಟ್ಟಾಗಿ ತಡೆಯಬೇಕು: ಸಿಎಂ ಖಡಕ್ ಸೂಚನೆ ಅರಣ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಮುಖ್ಯಮಂತ್ರಿಗಳ ಪದಕ ಪ್ರದಾನ ಸಮಾರಂಭದಲ್ಲಿ 2022, 2023 ನೇ ಸಾಲಿನ ಪದಕ ವಿತರಿಸಿ ಮಾತನಾಡಿದರು.  ಅರಣ್ಯ ಸಂಪತ್ತಿನ ಸಂರಕ್ಷಣೆಯ ಮಹತ್ವ ಅರಿತಿದ್ದ ಇಂಧಿರಾಗಾಂಧಿಯವರು ಅರಣ್ಯ ಸಂರಕ್ಷಣಾ ಕಾಯ್ದೆ ಜಾರಿಗೆ ತಂದಿದ್ದಾರೆ. ಇದು ಅತ್ಯಂತ ನಿಷ್ಠುರವಾಗಿದೆ. ಅರಣ್ಯಾಧಿಕಾರಿಗಳೂ ಅಷ್ಟೇ ನಿಷ್ಠುರವಾಗಿ ಅರಣ್ಯ ಒತ್ತುವರಿ ತಡೆಯಬೇಕು ಎಂದರು.  ಕಾಡು ಪ್ರಾಣಿಗಳಿಗೆ ಆಹಾರ, ಮೇವು ಮತ್ತು ನೀರು ಕಾಡಿನ  ಒಳಗೇ ಅಗತ್ಯವಿದ್ದಷ್ಟು ದೊರೆತರೆ ಅವು ಕಾಡಿನಿಂದ ಹೊರಗೆ ಬರುವುದಿಲ್ಲ. ಆಗ ಮಾನವ-ಪ್ರಾಣಿ ಸಂಘರ್ಷಕ್ಕೆ ತಡೆ ಬೀಳುತ್ತದೆ ಎಂದರು.  ಮಹಾತ್ಮಗಾಂಧಿಯವರು ಪ್ರಕೃತಿ ಪ್ರಿಯರಾಗಿದ್ದರು. "ಪ್ರಕೃತಿ ಮನುಷ್ಯನ‌ ಅಗತ್ಯಗಳನ್ನು ಪೂರೈಸುತ್ತದೆ. ಆದರೆ ಮನುಷ್ಯನ ದುರಾಸೆಗಳನ್ನು ಪೂರೈಸಲು ಆಗುವುದಿಲ್ಲ" ಎಂದು ಮಹಾತ್ಮಗಾಂಧಿ ಹೇಳಿದ್ದಾರೆ. ಇವತ್ತಿನ ಪರಿಸರದ ಅನಾಹುತಗಳಿಗೆ ಮನುಷ್ಯನ ದುರಾಸೆಯೇ ಕಾರಣ ಎಂದರು.  ಇಂದು ಪ್ರಶಸ್ತಿ ಸ್ವೀಕರಿಸಿದವರು ಉಳಿದವರಿಗೆ,

ದಿನ ಭವಿಷ್ಯ/ 04/09/2024/ ಬುಧವಾರ

Image
  ಮೇಷ ರಾಶಿ. ವೃತ್ತಿಪರ ಉದ್ಯೋಗಗಳಲ್ಲಿ ಒಂದು ಘಟನೆಯು ಆಶ್ಚರ್ಯಕರವಾಗಿರುತ್ತದೆ. ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗಾವಕಾಶಗಳು ದೊರೆಯುತ್ತವೆ. ಹೊಸ ಸ್ನೇಹಿತರ  ಪರಿಚಯಗಳು ಹೆಚ್ಚಾಗುತ್ತವೆ. ಸಹೋದರರಿಂದ ಶುಭ ಸುದ್ದಿ ಸಿಗುತ್ತದೆ. ಸ್ಥಿರಾಸ್ತಿ ಖರೀದಿ ಪ್ರಯತ್ನಗಳು ವೇಗಗೊಳ್ಳುತ್ತವೆ. ವ್ಯಾಪಾರಗಳು ಸುಗಮವಾಗಿ  ಸಾಗುತ್ತವೆ. ವೃಷಭ ರಾಶಿ. ಹಣಕಾಸಿನ  ತೊಂದರೆ ಉಂಟಾಗುತ್ತವೆ. ಹೊಸ ಸಾಲದ ಪ್ರಯತ್ನಗಳನ್ನು ಮಾಡಬೇಕಾಗುತ್ತದೆ. ದೂರ ಪ್ರಯಾಣದಲ್ಲಿ ಅಡಚಣೆಗಳು ಉಂಟಾಗುತ್ತವೆ. ದೈವಿಕ ಚಟುವಟಿಕೆಗಳ ಮೇಲೆ ಕೇಂದ್ರೀಕರಿಸುತ್ತೀರಿ. ಮನೆಯ ವಾತಾವರಣ ಅಸ್ತವ್ಯಸ್ತವಾಗಿರುತ್ತದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದು ಒಳ್ಳೆಯದಲ್ಲ.  ಉದ್ಯೋಗದಲ್ಲಿ ಹೆಚ್ಚುವರಿ ಕೆಲಸದ ಹೊರೆ ಇರುರುತ್ತದೆ. ಮಿಥುನ ರಾಶಿ. ಪ್ರಮುಖ ವ್ಯವಹಾರಗಳಲ್ಲಿ ವ್ಯರ್ಥ ಖರ್ಚು ಹೆಚ್ಚಾಗುತ್ತದೆ. ಸ್ನೇಹಿತರ ಜೊತೆ  ವಿವಾದದ  ಸೂಚನೆಗಳಿವೆ. ವೃತ್ತಿಪರ  ಉದ್ಯೋಗಗಳಲ್ಲಿ, ಕೆಲಸದ ಒತ್ತಡ ಹೆಚ್ಚಾಗಿ ಸಮಯಕ್ಕೆ ನಿದ್ರೆ ಮತ್ತು  ಆಹಾರ ಇರುವುದಿಲ್ಲ, ಮತ್ತು ಮನೆಯ ಹೊರಗಿನ ಪರಿಸ್ಥಿತಿಗಳು  ಅನುಕೂಲಕರವಾಗಿರುವುದಿಲ್ಲ.  ದೂರ ಪ್ರಯಾಣವನ್ನು ಮುಂದೂಡುವುದು ಉತ್ತಮ. ವ್ಯಾಪಾರಗಳು ನಿರಾಶೆಗಿಳಿಸುತ್ತವೆ. ಕಟಕ ರಾಶಿ. ಆತ್ಮೀಯರಿಂದ ಶುಭ ಕಾರ್ಯಕ್ಕೆ ಆಹ್ವಾನಗಳು ಬರುತ್ತವೆ. ದೀರ್ಘಕಾಲದ ವಿವಾದಗಳು ಬಗೆಹರಿಯುತ್ತವೆ. ಬಾಲ್ಯದ ಗೆಳೆಯರೊಂದಿಗೆ ಭೋಜನ ಮನರಂಜನಾ ಚಟುವಟಿಕೆಗಳಲ್ಲಿ ಭಾಗವಹಿಸುತ

RSS ದ್ವಿಮುಖ ಹೇಳಿಕೆ ಉತ್ತರ ಭಾರತದಲ್ಲಿ ಸಮರ್ಥನೆ ದಕ್ಷಿಣದಲ್ಲಿ ವಿರೋಧ..!

Image
  ಶಿವಮೊಗ್ಗ,ನವದೆಹಲಿ:   ನಿನ್ನೆ ಶಿವಮೊಗ್ಗದ ಖಾಸಗೀ ಹೊಟೇಲ್‌ನಲ್ಲಿ ಆರ್‌.ಎಸ್.ಎಸ್‌ ಕರ್ನಾಟಕ ದಕ್ಷಣ ಪ್ರಾಂತ ಪ್ರಚಾರ ಪ್ರಮುಖರಾದ ರಾಜೇಶ್‌ ಪದ್ಮಾರ್‌ ಪತ್ರಕರ್ಯರೊಂದಿಗೆ ಅನೌಪಚಾರಿಕ ಸಂವಾದ ಕಾರ್ಯಕ್ರಮವನ್ನು ನಡೆಸಿದರು ಈ ವೇಳೆ ಮಾತನಾಡಿದ ಆರ್‌.ಎಸ್.ಎಸ್‌ ದಕ್ಷಿಣದ ಮುಖಂಡ ರಾಜೇಶ್‌ ರವರು ವಿರೋಧ ಪಕ್ಷಗಳಾಗಿರುವ ಕಾಂಗ್ರೆಸ್‌ ಸೇರಿದಂತೆ ಇರೇ ಪಕ್ಷಗಳು ಪ್ರಮುಕವಾಗಿ ಬೇಡಿಕೆ ಇಟ್ಟಿರುವ ಜಾತೀ ಜನಗಣತಿಯ ಬಗ್ಗೆ ಪ್ರತಿಕ್ರಿಯೆಯನ್ನು ನೀಡಿ ಜಾತೀ ಜನಣಗತಿಯಂತ ಕಾರ್ಯಕ್ರಮಗಳಿಂದ ಭಾರತದೇಶದ ಏಕತೆ ಹಾಗೂ ಒಗ್ಗಟ್ಟಿಗೆ ಒಡಕು ಬರುವ ಸಾಧ್ಯತೆಗಳೇ ಹೆಚ್ಚು ಎಂಬುವ ರೀತಿಯಲ್ಲಿ ಮಾತನಾಡಿದ್ದರು. ಇಷ್ಟು ಮಾತ್ರವಲ್ಲದೇ ಜಾತಿ ವರ್ಗಗಳ ಹಿಂದೆ ಬಿದ್ದರೆ ಜನರಲ್ಲಿ ಇನ್ನಡು ಬೇದಮೂಡಬಹುದು ಇಂಥ ಕಾರ್ಯಗಳಿಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಎಂದಿಗೂ ಬೆಂಬಲಿಸುವುದಿಲ್ಲಾ ಜಾತಿ ಜನಗಳತಿ ನಡೆಸುವುದು ಸರಿಯಾದ ಕ್ರಮವಾಗಿಲ್ಲಿ ಇಂಥ ಕ್ರಮಗಳಿಗೆ ವಿರೋಧ ಪಕ್ಷಗಳೂ ರಾಜಕೀಯ ಲಾಭಕ್ಕಾಗಿ ಜಾತಿ ಜನಗಣತಿ ಬೇಡಿಕೆಗಳು ಇಡ್ಡುತಿದ್ದು ಇದನ್ನು ಸಂಘಟನೆ ಎಂದಿಗೂ ಬೆಂಗಲಿಸುವುದಿಲ್ಲಾ ಎಂದು ಅನೌಪಚಾರಿಕ ಸಂವಾದದ ಸಮಯದಲ್ಲಿ ರಾಜೇಶ್‌ ಪದ್ಮಾರ್‌ ಪತ್ರಕರ್ತರಿಗೆ ಹೇಳಿಕೆಯನ್ನು ನೀಡಿದ್ದರೆ. ಆದರೆ ಆರ್‌.ಎಸ್.ಎಸ್‌ ನ ಉತ್ತರ ಭಾರತದ ಪ್ರಚಾರ ಸಮಿತಿಯ ಪ್ರಮುಖರಾಗಿರುವ ಸುನೀಲ್‌ ಅಂಬೇಕರ್ ಜನರ ಒಳಿತಿಗಾಗಿ ನಡೆಯಬೇಕೇ ವಿನಃ ಚುನಾವಣಾ ಲಾಭಕ್ಕಾಗಿ ಅಲ್ಲ; ಜಾತಿ ಗಣತಿಗೆ ಆರ್‌

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲೆ ಶಾಂತಿಸಭೆ.

Image
  ಶಿವಮೊಗ್ಗ : ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾಡಳಿತ ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಈ ದಿನ ದಿನಾಂಕಃ 02-09-2024  ರಂದು ಬೆಳಗ್ಗೆ ಶಿವಮೊಗ್ಗ ನಗರದ  ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಯನ್ನು ಹಮ್ಮಿಕೊಂಡಿದ್ದು ಶ್ರೀ ಗುರುದತ್ ಹೆಗ್ಡೆ ಮಾನ್ಯ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಮತ್ತು  ಮಿಥುನ್ ಕುಮಾರ್ ಜಿ. ಕೆ. ಐಪಿಎಸ್,  ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಸಭೆಯ ಅಧ್ಯಕ್ಷತೆಯನ್ನುವಹಿಸಿದ್ದು,   ಚನ್ನಬಸಪ್ಪ, ಮಾನ್ಯ ಶಾಸಕರು, ಶಿವಮೊಗ್ಗ ವಿಧಾನ ಸಭಾ ಕ್ಷೇತ್ರ ರವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು.  ಮಾನ್ಯ ಜಿಲ್ಲಾಧಿಕಾರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಿ  ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು. 1) ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಮುಖಂಡರು ಮತ್ತು ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ್ದು, ಇವುಗಳನ್ನು ಗಂಭೀರವಾಗಿ ಪರಿಗಳಣಿಸಲಾಗಿದೆ ಹಾಗೂ  ಯಾವುದೇ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಎಲ್ಲಾ ರೀತಿಯ ಸಹಕಾರ* ನೀಡಲಿದೆ.  2) ಈ ಹಿಂದಿನಿಂದಲೂ ಎಲ್ಲಾರೂ ಸೇರಿ ಖುಷಿಯಿಂದ ಹಬ್ಬಗಳನ್ನು ಆಚರಿಸಿಕೊಂಡು ಬಂದಿದ್ದು, ಆದರೆ ಯಾರೋ ಕೆಲವು ಜನ ಕಿಡಿಗೇಡಿಗಳು ಮಾಡುವ ಕಿಡಿಗೇಡಿತನದಿಂದ ಇಡೀ ಜಿಲ್ಲೆಯ ಹೆಸರು ಹಾಳಾಗುತ್ತದೆ. ಆದ್ದರಿಂದ ಜಿಲ್ಲೆಯಲ್ಲಿ ಶಾ

ಭೀಕರ ಅಪಘಾತ : ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು, ಐವರು ಗಂಭೀರ

Image
  ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಯಶವಂತಪುರ ಸರ್ಕಲ್​ ಬಳಿ ಮಂಗಳವಾರ ಸಂಭವಿಸಿದೆ. ಇಂದು ಮುಂಜಾನೆ 3.45ರ ಸುಮಾರಿಗೆ ಅಪಘಾತ ಸಂಭವಿಸಿದೆ. ಬೈಕ್​ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದಿದ್ದು, ಪರಿಣಾಮ ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಸ್ಯಾಂಕಿ ರಸ್ತೆಯಿಂದ ತುಮಕೂರು ರಸ್ತೆಗೆ ತೆರಳುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿ ಹೊಡೆದು ಫ್ಲೈಓವರ್​​​​​ ಮೇಲೆ ಡಿವೈಡರ್​​​ನಿಂದ ಹಾರಿ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ. ಪೊಲೀಸರು ಹಾಗೂ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಐವರ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.

ದಿನ ಭವಿಷ್ಯ/03/09/2024/ಮಂಗಳವಾರ

Image
  ಮೇಷ ರಾಶಿ. ಪ್ರಮುಖ ವ್ಯವಹಾರದಲ್ಲಿ ಸಂಬಂಧಿಕರು ನಿಮ್ಮ ಮಾತಿಗೆ ಭಿನ್ನಾಭಿಪ್ರಾಯ ಹೊಂದಿರುತ್ತಾರೆ. ಕುಟುಂಬ ಸದಸ್ಯರೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ಆದಾಯಕ್ಕಿಂತ ಖರ್ಚು ಹೆಚ್ಚಾಗುತ್ತದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಅನಿರೀಕ್ಷಿತ ವಿವಾದಗಳು ಉಂಟಾಗುತ್ತವೆ. ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳಿರುತ್ತವೆ. ವೃಷಭ ರಾಶಿ. ದಿಢೀರ್ ಪ್ರಯಾಣದ ಸೂಚನೆಗಳಿವೆ. ಬಂಧು ಮಿತ್ರರೊಂದಿಗೆ ದೇವಸ್ಥಾನಗಳಿಗೆ ಭೇಟಿ ನೀಡುತ್ತೀರಿ. ಕೈಗೆತ್ತಿಕೊಂಡ ಕೆಲಸಗಳಲ್ಲಿ ಸಮಸ್ಯೆಗಳಿರುತ್ತವೆ. ಹೊಸ ಸಾಲದ ಪ್ರಯತ್ನಗಳು ನಡೆಯುತ್ತವೆ. ವೃತ್ತಿ ಮತ್ತು ವ್ಯಾಪಾರ ಮಂದಗತಿಯಲ್ಲಿ ಸಾಗುತ್ತವೆ.  ಬಂಧು ಮಿತ್ರರೊಂದಿಗೆ  ವಿವಾದಗಳು ಉಂಟಾಗುತ್ತವೆ. ಮಿಥುನ ರಾಶಿ. ಪ್ರಮುಖ ವ್ಯಕ್ತಿಗಳಿಂದ ಬೆಂಬಲ ದೊರೆಯುತ್ತದೆ. ವ್ಯಾಪಾರಗಳು ಲಾಭದಾಯಕವಾಗಿರುತ್ತವೆ. ಉದ್ಯೋಗಿಗಳಿಗೆ ಹೊಸ ಪ್ರೋತ್ಸಾಹ  ದೊರೆಯುತ್ತದೆ. ಆಶ್ಚರ್ಯಕರ ಸಂಗತಿಗಳು ತಿಳಿದು ಬರುತ್ತವೆ . ಆರ್ಥಿಕ ಸಂಕಷ್ಟವಿದ್ದರೂ ಅಗತ್ಯಕ್ಕೆ  ಆರ್ಥಿಕ ನೆರವು ದೊರೆಯುತ್ತದೆ. ಕಟಕ ರಾಶಿ. ಹಣಕಾಸಿನ ವ್ಯವಹಾರಗಳಲ್ಲಿ ಏರುಪೇರು ಉಂಟಾಗುತ್ತದೆ. ಪ್ರಯಾಣದಲ್ಲಿ ವಾಹನ ತೊಂದರೆಗಳಿರುತ್ತವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಸೋದರ ಸಂಬಂಧಿಗಳೊಂದಿಗೆ ಭೂ  ವಿವಾದಗಳಿರುತ್ತವೆ. ವೃತ್ತಿ ಮತ್ತು ವ್ಯಾಪಾರ ನಿಧಾನವಾಗುತ್ತದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳೊಂದಿಗೆ

ನ್ಯಾಯಾಲಯದ ತೀರ್ಮಾನವಾದಂತೆ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ:ಮುಖ್ಯಮಂತ್ರಿ ಸಿದ್ದರಾಮಯ್ಯ

Image
  ಮೈಸೂರು, ಸೆಪ್ಟೆಂಬರ್ 03 : ಸರ್ಕಾರ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಇದಕ್ಕೆ ರಾಜಮಾತೆ ಪ್ರಮೋದಾದೇವಿಯವರು  ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ.  ನ್ಯಾಯಾಲಯದ ತೀರ್ಮಾನವಾದಂತೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ನ್ಯಾಯಾಲಯ ತಡೆಯಾಜ್ಞೆ ತೆರವುಗೊಳಿಸಿದ ಬಳಿಕ ಪ್ರಾಧಿಕಾರದ  ಮೊದಲ ಸಭೆ ಕರೆಯಲಾಗಿದೆ ಎಂದು ತಿಳಿಸಿದರು. ರಾಜಮಾತೆ ಪ್ರಮೋದಾದೇವಿಯವರು ಹಾಗೂ ಸಂಸದ ಯದುವೀರ್ ಅವರು  ಸಭೆ ನಡೆಸುವುದು ಕಾನೂನುಬಾಹಿರ  ಎಂದು  ಆಡಳಿತ ಮಂಡಳಿ ಕಾರ್ಯದರ್ಶಿಗಳಿಗೆ  ಪತ್ರ ಬರೆದಿರುವ ಬಗ್ಗೆ  ಮಾತನಾಡಿ ಹಿಂದೆಯೂ ಆಡಳಿತ ಮಂಡಳಿ ಇತ್ತು. ಹಿಂದೆ ಸದಸ್ಯರನ್ನು, ಅಧ್ಯಕ್ಷರನ್ನು ಸರ್ಕಾರ ನೇಮಿಸುತ್ತಿತ್ತು. ಸರ್ಕಾರದ ಅಧೀನದಲ್ಲಿಯೇ ಇತ್ತು ಎಂದರು.  ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ ಕೋವಿಡ್  ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು. ರಾಜಕೀಯ ಉದ್ದೇಶದಿಂದ ವರದಿ ತರಿಸಲಾಗಿದೆ ಎಂದು ಸಂಸದ ಸುಧಾಕರ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್

ಭ್ರಷ್ಟ ರಾಜಕಾರಣಿಗಳಿಗೂ ಆರ್‌.ಎಸ್‌.ಎಸ್.‌ ಗೂ ಸಂಪರ್ಕವಿಲ್ಲಾ..! ಆರ್‌.ಎಸ್.ಎಸ್.‌ ಭ್ರಷ್ಟರಿಗೆ ಸಮರ್ತಿಸುವುದಿಲ್ಲಾ ರಾಜೇಶ್ ಪದ್ಮಾರ್‌ ಹೇಳಿಕೆ.

Image
  ಶಿವಮೊಗ್ಗ: ಇಂದು ಶಿವಮೊಗ್ಗದಲ್ಲಿ ಆರ್‌.ಎಸ್.ಎಸ್‌ ಕರ್ನಾಟಕ  ದಕ್ಷಣ ಪ್ರಾಂತ ಪ್ರಚಾರ ಪ್ರಮುಖರಾದ ರಾಜೇಶ್‌ ಪದ್ಮಾರ್‌ ಪತ್ರಕರ್ಯರೊಂದಿಗೆ ಅನೌಪಚಾರಿಕ ಸಂವಾದ ಕಾರ್ಯಕ್ರಮವನ್ನು ನಡೆಸಿದರು ಈ ಕಾರ್ಯಮದಲ್ಲಿ ಸಂಘದ ಇತರೆ ಪ್ರಮುಖರು ಬಾಗಿಯಾಗಿದ್ದು ಸಂವಾದದ ನೇತೃತ್ವವನ್ನು ರಾಜೇಶ್‌ ಪದ್ಮಾರ್‌ ವಹಿಸಿಕೊಂಡಿದ್ದರು. ಈ ವೇಳೆಯಲ್ಲಿ ಅವರು ಮಾತನಾಡಿ ದೇಶದಲ್ಲಿ ವಿವಿ ಜಾತಿ ವರ್ಗಗಳ ಸಮೂಹ ಬಲಗೊಳ್ಳುತಿರುವುದು ಸರಿಯಲ್ಲ ಈ ಹಿನ್ನೆಲೆ ಭಾರತದ ಸಮಾಜದಲ್ಲಿ ಒಡಕುಗಳನ್ನು ಹೋಗಲಾಡಿಸಿ ಏಲ್ಲಾ ಸಮಾಜಗಳಲ್ಲಿ ಏಕತೆಯನ್ನು ತರುವ ಅಗತ್ಯವಿದೆ.  ಈ ಹಿನ್ನೆಲೆ ಸಂಘವು ವಿವಿದ ವರ್ಗಗಳ ಕುಟುಂಬಗಳನ್ನು ಒಟ್ಟು ಸೇರಿಸಿ ಹಲವು ಕಾರ್ಯಕ್ರಮಗಳನ್ನು ಡೆಸುವ ಮುಖೇನ ದೇಶದಲ್ಲಿ ಒಗ್ಗಟು ತರುವ ಪ್ರಯತ್ನ ನಡೆಸುತ್ತಿದೆ. ಈ ಹಿನ್ನೆಲೆ ನಡೆಯುತಿರುವ ಪ್ರಮುಖ ಕಾರ್ಯಕ್ರಮಗಳಲ್ಲಿ ಸ್ವದೇಶಿ ವಸ್ತುಗಳ ಬಳಕೆ,ಆಡಳಿತದಲ್ಲಿ ಭ್ರಷ್ಟಾಚಾರ ಅಂತ್ಯಗೊಳಿಸುವುದು, ಸೇರಿದಿಂತೆ ಇತರೆ ಕ್ರಮಗಳ ಕಡೆಗೆ ಸಂಘ ಹೆಚ್ಚು ಗಮನ ಹರಿಸುತ್ತಿದೆ. ಇದು ಸಂಘ ಪ್ರಮುಖ ಗುರಿಯಾಗಿದ್ದು, ಸಂಘವು ಎಂದಿಗೂ ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ ಸಂರ್ಥನೆ ಮಾಡುವುದಿಲ್ಲಾ. ಅಂಥ ವ್ಯಕ್ತಿಗಳು ಆರ್‌.ಎಸ್‌.ಎಸ್.‌ ನಿಂದ ಇತರೇ ಸಂಘಟನೆಗಳಿಗೆ ಹೋದವರಾಗಿದ್ದರು ಅವರನ್ನು ಸಂಘ ಎಂದಿಗೂ ಬೆಂಬಲಿಸುವುದಿಲ್ಲಾ. ಅಂಥವರು ಗನವೇಶದಾರಿಗಳಾಗಿ ಸಂಘದ ಕಾರ್ಯಕ್ರಮಗಳಲ್ಲಿ ಬಾಗಿಯಾದರೂ ಕೂಡ ಅವರಿಗೆ ಎಂದು ಸಂಘವು ಬೆಂಬಲಿ

ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲದ ಬಳಿ ಭೂಕುಸಿತ; ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವು

Image
  ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ನಂತರ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಬಾಲಕಿಗೆ ತೀವ್ರ ಗಾಯಗಳಾಗಿವೆ. ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ತಲುಪಿದೆ ಎಂದು ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಸಿಇಒ ತಿಳಿಸಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಮಾತಾ ವೈಷ್ಣೋ ದೇವಿ ಟ್ರ್ಯಾಕ್‌ನಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ, ಮತ್ತೊಬ್ಬರು ಗಾಯಗೊಂಡಿದ್ದಾರೆ. ಈ ಸ್ಥಳದಿಂದ ಸಂಗ್ರಹಿಸಲಾದ ಸಿಸಿಟಿವಿ ವಿಡಿಯೋ ಮಾರ್ಗದಲ್ಲಿ ಬಿದ್ದ ಅವಶೇಷಗಳನ್ನು ತೋರಿಸಿದೆ.ಈ ಘಟನೆಯನ್ನು ದೃಢಪಡಿಸಿದ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿ, ವಿಪತ್ತು ನಿರ್ವಹಣೆಯ ತಂಡವು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿದೆ ಎಂದು ಹೇಳಿದೆ.  ಶ್ರೀ ಮಾತಾ ವೈಷ್ಣೋದೇವಿ ದೇಗುಲದ ಟ್ರ್ಯಾಕ್‌ನಲ್ಲಿ ಕಲ್ಲುಗಳು ಉರುಳಿ, ಭೂಕುಸಿತ ಸಂಭವಿಸಿದೆ. ಹವಾಮಾನ ಇಲಾಖೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 12ರವರೆಗೆ ಜಮ್ಮು ಕಾಶ್ಮೀರದಲ್ಲಿ ಶುಷ್ಕ ಹವಾಮಾನವನ್ನು ಮುನ್ಸೂಚನೆ ನೀಡಿದೆ.

ಬಡವರಪರ ಕೆಲಸದಲ್ಲಿ ಯಾವುದೇ ರಾಜಿ ಮಾಡುವುದಿಲ್ಲ- ಮುಖ್ಯಮಂತ್ರಿ ಸಿದ್ದರಾಮಯ್ಯ

Image
  ಆಸ್ಪತ್ರೆಯ ಶುಚಿತ್ವವನ್ನು ಕಾಯ್ದುಕೊಳ್ಳುವುದು ಬಹಳ ಮುಖ್ಯ ಬಡವರಪರ ಕೆಲಸದಲ್ಲಿ ಯಾವುದೇ ರಾಜಿ ಮಾಡುವುದಿಲ್ಲ ಬೆಂಗಳೂರು, ಸೆಪ್ಟೆಂಬರ್ 2 : ಸಮಾಜದಲ್ಲಿ ಬಡವರು ಮತ್ತು ಕೆಳಮಧ್ಯಮವರ್ಗದವರು ಸರ್ಕಾರಿ ಆಸ್ಪತ್ರೆಗಳ ಮೇಲೆಯೇ ಅವಲಂಬಿಸಿರುತ್ತಾರೆ. ಖಾಸಗಿ ಆಸ್ಪತ್ರೆಯಲ್ಲಿ ದೊರೆಯುವಂತಹ ಗುಣಮಟ್ಟದ ಆರೋಗ್ಯ ಸೌಲಭ್ಯ ಸೂಪಲ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಅವರಿಗೆ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಶಿವಾಜಿನಗರದ ಚರಕ ಸೂಪಲ್ ಸ್ಪೆಷಾಲಿಟಿ ಆಸ್ಪತ್ರೆಯ ಸೂಪರ್ ಸ್ಪೆಷಾಲಿಟಿ ಚಿಕಿತ್ಸಾ ವ್ಯವಸ್ಥೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಶಿವಾಜಿನಗರದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಈ ಭಾಗದ ಜನರಿಗೆ ಉತ್ತಮ ಗುಣಮಟ್ಟದ ಆರೋಗ್ಯ ಸೇವೆ  ನೀಡಲಿದೆ. 2016-17 ರಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೈಸೂರು, ಗುಲಬರ್ಗಾ, ಬೆಳಗಾವಿ  ಹಾಗೂ ಬೆಂಗಳೂರಿನ ಶಿವಾಜಿನಗರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಯೋಜನೆಯನ್ನು ಕೈಗೊಳ್ಳಲಾಗಿತ್ತು.  ಖಾಸಗಿ ಆಸ್ಪತ್ರೆಯಲ್ಲಿ ಲಕ್ಷಗಟ್ಟಲೆ ಚಿಕಿತ್ಸಾ ವೆಚ್ಚವನ್ನು ಬಡವರಿಗೆ ಭರಿಸಲು ಸಾಧ್ಯವಿಲ್ಲ. ಅಲ್ಲಿನ ದುಬಾರಿ ವೆಚ್ಚವನ್ನು ಬಡವರು ಪಾವತಿಸದೇ  ಹೋದಲ್ಲಿ,ಅವರಿಗೆ ತಮ್ಮವರ ಶವವನ್ನು ನೀಡದೇ ಅಮಾನುಷವಾಗಿ ವರ್ತಿಸುತ್ತಾರೆ ಎಂದರು. ಬೌರಿಂಗ್ ಆಸ್ಪತ್ರೆಯಲ್ಲಿ  ವೈದ್ಯಕೀಯ ಕಾಲೇಜಿಗೆ ಅಡಿಗಲ್ಲು ನಾನೇ ಹಾಕುತ್ತೇನೆ ನಾನು ಹಿಂದೆ ಮುಖ್ಯಮಂತ್ರಿಯಾಗಿದ್ದಾ

ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.9ಕ್ಕೆ ಮುಂದೂಡಿಕೆ

Image
  ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸೆ.9ಕ್ಕೆ ವಿಚಾರಣೆಯನ್ನು ಮುಂದೂಡಿದೆ‌. ಸಿ.ಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಸೆಪ್ಟೆಂಬರ್.2ರ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಡೆಸಬೇಕಿತ್ತು. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದರು.

ಪೋಕ್ಸೋ ಕಾಯೆ-2012ರ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮ

Image
  ಶಿವಮೊಗ್ಗ, ಸೆಪ್ಟಂಬರ್ 02: ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಸ್ತೂರಬಾ ಬಾಲಿಕ ಪದವಿ ಪೂರ್ವ ಕಾಲೇಜು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸೆ. 04 ರಂದು ಬೆಳಗ್ಗೆ 10.00ಕ್ಕೆ ನಗರದ ಕಸ್ತೂರಬಾ ಬಾಲಿಕ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಪೋಕ್ಸೋ ಕಾಯ್ದೆ -2012, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006 ಹಾಗೂ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ಇರುವ ಕಾಯ್ದೆಗಳು ಹಾಗೂ ಪುನರ್ವಸತಿ ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿ.ಕಾ.ಸೇ.ಪ್ರಾ.ದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ.ಎಸ್. ಉದ್ಘಾಟಿಸುವರು. ಕ.ಬಾ.ಪ.ಪೂ. ಕಾಲೇಜಿನ ಪ್ರಾಂಶುಪಾಲ ವೆಂಕಟೇಶ್ ಎಸ್.ಆರ್. ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶಶಿರೇಖರವರಿಂದ ಪ್ರಾಸ್ತಾವಿಕ ನುಡಿ. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ ಬಿ.ಹೆಚ್., ಪ.ಪೂ.ಶಿ.ಇಲಾಖೆಯ ಉಪನಿರ್ದೇಶಕ ಚಂದ್ರಪ್ಪ ಎಸ್. ಗುಂಡಪಲ್ಲಿ, ಜಿಲ್ಲಾ ನಿರೂಪಣಾ ಅಧಿಕಾರಿ ಡಾ. ಸಂತೋಷ್ ಕುಮಾರ್ ಹೆಚ್. ಇವರುಗಳು ಉಪಸ್ಥಿತರಿರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಮ್ಸ್ ಪ್ರಾಧ್ಯಾಪಕಿ ಹಾಗೂ

ಮಳೆಹಾನಿ ಪ್ರದೇಶಗಳಿಗೆ ಸಚಿವ ಮಧುಬಂಗಾರಪ್ಪ..!

Image
  ಶಿವಮೊಗ್ಗ: ಮಲೆನಾಡು ಪ್ರದೇಶವಾಗಿರುವ ಶಿವಮೊಗ್ಗದಲ್ಲಿ ಈ ಬಾರಿ ಸುರಿದ ಅತೀವ ಮಳೆಯಿಂದಾಗಿ ಸೊರಬ ತಾಲ್ಲೂಕಿನ ಗುಡವಿ ಗ್ರಾಮದಿಂದ ಮೂಡದಿವಳಿಗೆ-ಬೆನ್ನೂರನ್ನು ಸಂಪರ್ಕಿಸುವ ಸೇತುವೆ ಪಕ್ಕದ ರಸ್ತೆ, ವರದಾ ನದಿ ಪ್ರವಾಹದಿಂದಾಗಿ ಸಂಪೂರ್ಣ ಹಾಳಾಗಿದ್ದು, ಇಂದು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಮಧುಬಂಗಾರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು,  ಈ ವೇಳೆ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು ಶೀಘ್ರವೇ ಕಾಮಗಾರಿ ಕೈಗೊಳ್ಳಲು ಸೂಚಿಸಲಾಯಿತು. ಇವರ ಈ ಮಾತಿಗೆ ಸ್ವಂದಿಸಿ ಅಧಿಕಾರಿಗಳು ಅದಷ್ಟು ವೇಗವಾಗಿ ಎಲ್ಲಾ ಕಾಮಗಾರಿಗಳನ್ನ ಪ್ರಾರಂಬ ಮಾಡುವುದರ ಜೊತೆಯಲ್ಲಿ ಸಂಪೂರ್ಣ ಗೊಳಿಸುವುದಾಗಿ ಹೇಳಿದರು. ಈ ವೇಳೆ ಜನಪ್ರತಿನಿಧಿಗಳು, ಮುಖಂಡರು ಹಾಗೂ PWD ಇಂಜಿನಿಯರ್ ಚಂದ್ರಪ್ಪ ಸೇರಿದಂತೆ ಸ್ಥಳೀಯರು ಉಪಸ್ಥಿತರಿದ್ದರು.

ದಿನ ಭವಿಷ್ಯ/02/09/2024/ಸೋಮವಾರ

Image
  ಮೇಷ ರಾಶಿ. ಕೌಟುಂಬಿಕ ವ್ಯವಹಾರಗಳಲ್ಲಿ ಆಲೋಚನೆಗಳು  ಕೂಡಿ ಬರುತ್ತವೆ. ಹಠಾತ್ ಪ್ರಯಾಣದ  ಸೂಚನೆಗಳಿವೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ. ಆಪ್ತರೊಂದಿಗೆ ಸಣ್ಣಪುಟ್ಟ  ವಿವಾದ ಉಂಟಾಗುತ್ತದೆ. ವ್ಯಾಪಾರದಲ್ಲಿ ಅಲ್ಪ ಲಾಭವನ್ನು ಪಡೆಯುತ್ತೀರಿ. ವೃತ್ತಿಪರ ಉದ್ಯೋಗಗಳಲ್ಲಿ  ಅನುಕೂಲಕರ ವಾತಾವರಣವಿರುತ್ತದೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ವೃಷಭ ರಾಶಿ. ಯೋಜಿತ ಕಾರ್ಯಗಳು ಸಕಾಲದಲ್ಲಿ ಪೂರ್ಣಗೊಳ್ಳುತ್ತವೆ. ವೃತ್ತಿಪರ ಉದ್ಯೋಗಗಳಲ್ಲಿ ನಿಮ್ಮ ಪ್ರತಿಭೆಗೆ ತಕ್ಕ ಮನ್ನಣೆ ಸಿಗುತ್ತದೆ. ಪ್ರಮುಖ ವ್ಯವಹಾರಗಳಲ್ಲಿ ಆತ್ಮೀಯರ ಸಲಹೆ ಪಡೆದು ಮುನ್ನಡೆಯುವುದು ಉತ್ತಮ. ಮೌಲ್ಯದ ವಸ್ತುಗಳನ್ನು ಖರೀದಿಸಲಾಗುತ್ತದೆ. ವ್ಯವಹಾರಗಳಲ್ಲಿ ನಿರೀಕ್ಷೆಗಳು  ಈಡೇರುತ್ತವೆ. ಮಿಥುನ ರಾಶಿ. ಸ್ಥಿರಾಸ್ತಿ ವಿವಾದಗಳು ಕಿರಿಕಿರಿಯನ್ನುಂಟು ಮಾಡುತ್ತವೆ. ಸಣ್ಣ ಆರೋಗ್ಯ ಸಮಸ್ಯೆಗಳು ನೋವುಂಟು ಮಾಡುತ್ತವೆ. ವ್ಯಾಪಾರಗಳು ಗೊಂದಲಮಯವಾಗಿರುತ್ತವೆ. ಕೈಗೆತ್ತಿಕೊಂಡ ಕೆಲಸಗಳು ಸ್ವಲ್ಪ ನಿಧಾನಗತಿಯಲ್ಲಿ ಸಾಗುತ್ತವೆ. ವ್ಯರ್ಥ ಖರ್ಚುಗಳು ಹೆಚ್ಚಾಗುತ್ತವೆ. ಉದ್ಯೋಗದಲ್ಲಿ ಅಧಿಕಾರಿಗಳೊಂದಿಗಿನ ಚರ್ಚೆ ಫಲಿಸುವುದಿಲ್ಲ. ಹಠಾತ್ ಪ್ರಯಾಣದ  ಸೂಚನೆಗಳಿವೆ. ಕಟಕ ರಾಶಿ. ದೈವಿಕ ಸೇವಾ ಕಾರ್ಯಗಳಲ್ಲಿ ಭಾಗವಹಿಸುತ್ತೀರಿ. ಹಳೆಯ ಬಾಕಿ ವಸೂಲಿಯಾಗುತ್ತದೆ. ಉದ್ಯೋಗದಲ್ಲಿ ನಿಯೋಜಿಸಲಾದ ಕರ್ತವ್ಯಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುತ್ತದೆ. ಸಮಾಜದ ಪ್ರಸಿದ್ಧ ವ್ಯಕ್ತಿಗಳೊಂದಿಗೆ 

ಮಂಗಳೂರು | ಮೊಸರು ಕುಡಿಕೆ ಉತ್ಸವದಲ್ಲಿ ಯುವತಿ ಜೊತೆ ಯುವಕ ಅಸಭ್ಯ ವರ್ತನೆ: ವ್ಯಾಪಕ ಆಕ್ರೋಶ

Image
  ಮಂಗಳೂರು : ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಡೆದ ಮೊಸರು ಕುಡಿಕೆ ಉತ್ಸವದ ಮೆರವಣಿಗೆ ವೇಳೆ ಗುಂಪಿನಲ್ಲಿದ್ದ ಯುವಕನೋರ್ವ ಸಾರ್ವಜನಿಕವಾಗಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿರುವ ವಿಡಿಯೋ ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಂಗಳೂರಿನ ತೊಕ್ಕಟ್ಟುವಿನಲ್ಲಿ ಮೊಸರು ಕುಡಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯುವಕರ ಗುಂಪಿನಲ್ಲಿ ಯುವತಿ ಒಂಟಿಯಾಗಿದ್ದಳು. ಮತ್ತೊಂದೆಡೆ ಯುವತಿ ಮಂಗಳಮುಖಿಯೇ? ಎಂಬ ಅನುಮಾನಕೂಡ ವ್ಯಕ್ತವಾಗಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಕೇಸರಿ ಶಾಲು ತೊಟ್ಟ ಯುವಕ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ್ದು ಅಲ್ಲಿ ನೆರೆದಿದ್ದ ಜನರು ನೋಡುತ್ತಾ ನಿಂತಿದ್ದರು. ಈ ರೀತಿ ವರ್ತನೆ ಎಷ್ಟು ಸರಿ ಎಂದು ಸ್ಥಳೀಯರು ಆಕ್ರ‍ೊಶ ವ್ಯಕ್ತಪಡಿಸಿದ್ದಾರೆ.

ಕೋವಿಡ್‌ ಹಗರಣ ತನಿಖಾ ವರಿದಿ ಸಿ.ಎಂ ಸಿದ್ದರಾಮಯ್ಯನವರಿಗೆ ಹಸ್ತಾಂತರ.

Image
 ಬೆಂಗಳೂರು: ಕೋವಿಡ್‌ ಸಂದರ್ಬದಲ್ಲಿ ಅದಿಕಾರದಲ್ಲಿದ್ದ ಬಿ.ಎಸ್‌ ಯಡಿಯೂರಪ್ಪನವರ ನೇತೃತ್ವದ ಬಿ.ಜೆ.ಪಿ ಸರ್ಕಾರದ ಸಮಯದಲ್ಲಿ ನಡೆಯಲಾಗಿದೆ ಎನ್ನಲಾಗಿರುವ ಆರೋಗ್ಯ ಸಂಬಂದ ವಸ್ತುಗಳ ಕರಿದಿಯಲ್ಲಿ ಅಂದಿನ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿರುವ ಸುಧಾಕರ್‌ ರವರ ಮೇಲೆ ಸಾಕಷ್ಟು ಆರೋಪಗಳು ಕೇಳಿಬಂದಿದು, ಇದಕ್ಕಾಗಿ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ಹಾ ಇವರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಲಾಗಿತ್ತು.  ಈ ತಂಡವು ನಿನ್ನೆ ರಾಜ್ಯ ಮುಖ್ಯಮಂತ್ರಿಗಳಾಗಿರುವ ಸಿ.ಎಂ ಸಿದ್ದರಾಮಯ್ಯನವರನ್ನು ಬೇಟಿ ಮಾಡಿ ನೂರಾರು ಪುಟದ ತನಿಖಾ ವರದಿಯನ್ನು ಹಸ್ತಾಂತರಿಸಿದರು, ಇನ್ನು ಈ ತನಿಖಾವರದಿಯಲ್ಲಿ ಕೊವಿಡ್‌ ಸಂದರ್ಭದಲ್ಲಿ ಪಿ.ಪಿ.ಐ ಕಿಟ್‌. ಮಾಸ್ಕ್‌,ಸೇರಿದಂತೆ ನೂರಾರು ವಸ್ತುಗಳ ಕರೀದಿಯಲ್ಲಿ ಹಗರಣ ನಡೆದಿರುವುದು ಸಾಬೀತಾಗಿದೆ ಎಂದು ಹೇಳಲಾಗಿದ್ದು, ಅಂದಿನ ಆರೋಗ್ಯ ಸಚಿವರಾಗಿರವ ಸುಧಾಕರ್‌ ರವರ ತಲೆಯಮೇಲೆ ಆರೋಪದ ತೂಗುಗತ್ತಿ ದೂಗಲಿದೆ ಎಂದು ಹೇಳಲಾಗಿದೆ. ಇನ್ನು ಈ ಸಮಯದಲ್ಲಿ ಮುಖ್ಯಮಂತ್ರಿಗ‌ಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಡವರ ಕೂಗು ಕೇಳದ ರಾಜ್ಯ ಹಾಗೂ ಕೇಂದ್ರ ಸರ್ಕಾರ ಯಾರಿಗೆ ಬಂತು ಎಲ್ಲಿಗೆ ಬಂತು ೪೭ರ ಸ್ವಾತಂತ್ರ್ಯ..?

Image
 ಶಿವಮೊಗ್ಗ: ನಮ್ಮ ಭಾರತಕ್ಕೆ ಸ್ವಾತಂತ್ರ್ಯ ಬಂದು 78 ವರ್ಷಗಳೆ ಕಳೆದು ಹೋಗಿದೆ ಆದರೆ ಈ ಸ್ವಾತಂತ್ರ್ಯ ಅನ್ನೋದು ಕೇವಲ ಹಣವಂತರಿಗೆ ಹಾಗೂ ದೊಡ್ಡ ಮಟ್ಟದ ವಂಚಕರ ಕೈಯಲ್ಲಿ ಸಿಲುಕಿಕೊಂಡಿದೆಯಾ ಎನ್ನುವ ಅನುಮಾನ ನಮಗೆ ಕಾಡುತ್ತೆ..! ಹೌದು ನಾವು ಇಂದು ಈ ಮಾತನ್ನು ಹೇಳೋಕು ಒಂದು ಕಾರಣವಿದೆ. ಮಾನನೀಯ ಘನವ್ಯತ್ಯ ಸುಪ್ರೀಂಕೋಟ್‌ ಆದೇಶಕ್ಕೂ ಇಲ್ಲಿ ಕವಡೇ ಕಾಡಿನ ಬೆಲೆಯಿಲ್ಲಾ ಎನ್ನುವಹಾಗೆ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನಡೆದುಕೊಳ್ಳುತ್ತಿವೆ. ಇದಕ್ಕೆ ತಾಜಾ ಉದಾಹರಣೆ ಎಂದರೆ ಅಗ್ರಿಗೋಡ್ಲ್‌,ಸಹಾರ,ಸಮೃದ್ಧ ಜೀವನ್‌,ಗರಿಮಾ,ಹಿಂದುಸ್ಥಾನ ಸಂಸ್ಥೆ ಸೇರಿದಂತೆ ನೂರಾರು ಕಂಪನಿಗಳು ಕೊಟ್ಯಾಂತರ ಜನರಿಗೆ ಕೋಟಿ,ಕೋಟಿ ವಂಚನೆ ಮಾಡಿದ್ದು ನಿಮ್ಮ ಮುಂದಿದೆ.  ಹೀಗೆ ಜನಸಾಮಾನ್ಯರಿಗೆ ವಂಚನೆ ಮಾಡಿದ ಖಾಸಗಿ ಹಣಕಾಡಿನ ಸಂಸ್ಥೆಗಳ ವಿರುದ್ಧ ದೇಶದ ಅತ್ಯುನ್ಯತ ನ್ಯಾಯಾಲಯವಾಗಿರೋ ಸುಪ್ರೀಂ ಕೋಟ್‌ ಜನರಿಗೆ ಹಣ ಹಿಂತಿರುಗಿಸಿ ಕೊಡುವಂತೆ ಸರ್ಕಾರಗಳಿಗೆ ಹಾಗೂ ಖಾಸಗೀ ಕಂಪನಿಗಳಿಗೆ ಆದೇಶ ನೀಡಿದ್ದರು ಇದುವರೆಗೂ ಯಾವುದೇ ಸರ್ಕಾರಗಳು ಇದರ ಬಗ್ಗೆ ಗಮನ ಹರಿಸುತ್ತಿಲ್ಲಾ. ಇದರಿಂದ ಬೇಸತ್ತಿರುವ ಸಂತ್ರಸ್ತ ಜನರು ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿಯ ಮುಂಬಾಗ ಪ್ರತಿಭಟನೆಗೆ ಮುಂದಾಗಿದ್ದು, ತಾವು ಪ್ರಾಣಕಳೆದುಕೊಳ್ಳುವವರೆಗೂ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೇಯೇ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಇನ್ನು ಈ ಹೋರಾಟವನ್ನು ವಂಚನೆ ಸ