ಪ್ರಾಸಿಕ್ಯೂಷನ್ ರದ್ದು ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೆ.9ಕ್ಕೆ ಮುಂದೂಡಿಕೆ


 ಬೆಂಗಳೂರು:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಸೆ.9ಕ್ಕೆ ವಿಚಾರಣೆಯನ್ನು ಮುಂದೂಡಿದೆ‌.

ಸಿ.ಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಸೆಪ್ಟೆಂಬರ್.2ರ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಡೆಸಬೇಕಿತ್ತು.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಟಿಜೆ ಅಬ್ರಹಾಂ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದರು. ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದರು.

Comments

Popular posts from this blog

ಮಂಗಳೂರು | ಮೊಸರು ಕುಡಿಕೆ ಉತ್ಸವದಲ್ಲಿ ಯುವತಿ ಜೊತೆ ಯುವಕ ಅಸಭ್ಯ ವರ್ತನೆ: ವ್ಯಾಪಕ ಆಕ್ರೋಶ

ಎಲೆಕ್ಟ್ರಿಕ್‌ ಬೈಕ್‌ ಸಹವಾಸ ಸಾಕಪ್ಪ ಸಾಕು ಎಂದ ನಟ ಶಂಕರ್..!‌

ಚಾಕುವಿನಿಂದ ಹಲ್ಲೆಮಾಡಿದವನಿಗೆ ಜೈಲು ಸಿಕ್ಷೆ ಶಿವಮೊಗ್ಗ ನ್ಯಾಯಾಲಯ ಆದೇಶ