ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲದ ಬಳಿ ಭೂಕುಸಿತ; ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದ ನಂತರ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಬಾಲಕಿಗೆ ತೀವ್ರ ಗಾಯಗಳಾಗಿವೆ. ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ತಲುಪಿದೆ ಎಂದು ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಸಿಇಒ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಮಾತಾ ವೈಷ್ಣೋ ದೇವಿ ಟ್ರ್ಯಾಕ್‌ನಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ, ಮತ್ತೊಬ್ಬರು ಗಾಯಗೊಂಡಿದ್ದಾರೆ. ಈ ಸ್ಥಳದಿಂದ ಸಂಗ್ರಹಿಸಲಾದ ಸಿಸಿಟಿವಿ ವಿಡಿಯೋ ಮಾರ್ಗದಲ್ಲಿ ಬಿದ್ದ ಅವಶೇಷಗಳನ್ನು ತೋರಿಸಿದೆ.ಈ ಘಟನೆಯನ್ನು ದೃಢಪಡಿಸಿದ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿ, ವಿಪತ್ತು ನಿರ್ವಹಣೆಯ ತಂಡವು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿದೆ ಎಂದು ಹೇಳಿದೆ.
ಶ್ರೀ ಮಾತಾ ವೈಷ್ಣೋದೇವಿ ದೇಗುಲದ ಟ್ರ್ಯಾಕ್‌ನಲ್ಲಿ ಕಲ್ಲುಗಳು ಉರುಳಿ, ಭೂಕುಸಿತ ಸಂಭವಿಸಿದೆ. ಹವಾಮಾನ ಇಲಾಖೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 12ರವರೆಗೆ ಜಮ್ಮು ಕಾಶ್ಮೀರದಲ್ಲಿ ಶುಷ್ಕ ಹವಾಮಾನವನ್ನು ಮುನ್ಸೂಚನೆ ನೀಡಿದೆ.
Comments
Post a Comment